ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್

ನವದೆಹಲಿ: ಕೇಂದ್ರ ತನಿಖಾ ದಳ ಸಿಬಿಐ ನ ನೂತನ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಿ, ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.

Ad Widget ... ..

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭಾ ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನೊಳಗೊಂಡ ಸಮಿತಿ ನಡುವೆ ನಡೆದ ಸರಣಿ ಸಭೆಗಳ ಬಳಿಕ ಮಂಗಳವಾರ ಸಂಜೆ ಸರ್ಕಾರ ಈ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

Ad Widget

ಮಹಾರಾಷ್ಟ್ರ ಕೇಡರ್‌ನ 1985 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿದ್ದಾರೆ. ಮಹಾರಾಷ್ಟ್ರದ ಪೊಲೀಸ್‌ ಮಹಾನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

Leave a Comment

Your email address will not be published. Required fields are marked *