Ad Widget .

ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ| ಶೀಘ್ರದಲ್ಲೇ ನೇರ ನೇಮಕಾತಿ ಪ್ರಕ್ರಿಯೆ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ದೊರೆತಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

Ad Widget . Ad Widget . Ad Widget .

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 778 ವಿವಿಧ 10ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದೆ.

ವಿಷಯವಾರು ಉಪನ್ಯಾಸಕರ ಖಾಲಿ ಹುದ್ದೆ ಈ ರೀತಿ ಇದೆ…
ಕನ್ನಡ 100
ಇಂಗ್ಲೀಷ್ 120
ಇತಿಹಾಸ 120
ಅರ್ಥಶಾಸ್ತ್ರ 180
ಭೂಗೋಳಶಾಸ್ತ್ರ 20
ವಾಣಿಜ್ಯ ಶಾಸ್ತ್ರ 80
ಸಮಾಜಶಾಸ್ತ್ರ 75
ರಾಜ್ಯಶಾಸ್ತ್ರ 75
ಮನಶಾಸ್ತ್ರ 02
ಗಣಕ ವಿಜ್ಞಾನ 06

Leave a Comment

Your email address will not be published. Required fields are marked *