ಸುಪ್ರೀಂನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ.

Ad Widget ... ..

ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

Ad Widget

ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಿ ಹೈಕೋರ್ಟ್ ಸೂಚನೆ ನೀಡಿತ್ತು. ಅಲ್ಲದೇ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧರ್ಮದ ಪ್ರತಿನಿಧಿಸುವಂತಿಲ್ಲ. ಸಮವಸ್ತ್ರ ಧರಿಸಬೇಕು ಎಂದು ಆದೇಶಿಸಿತ್ತು.

ಹಿಜಾಬ್‌ ವಿವಾದ ಕುರಿತು ಸುಪ್ರೀಂಕೋರ್ಟ್‌ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದ್ದು, ವಿವಾದದ ಕುರಿತು ವಿವರ ನೀಡುವಂತೆ ಸೂಚಿಸಿದೆ.

Leave a Comment

Your email address will not be published. Required fields are marked *