ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು

ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್​ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

Ad Widget ... ..

ಈ ಹಿಂದೆಯೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Leave a Comment

Your email address will not be published. Required fields are marked *