ಸಮಗ್ರ ನ್ಯೂಸ್ : ಮದುವೆ ಸಮಾರಂಭದ ವೇಳೆ ಹೆಚ್ಚುವರಿ ಹಪ್ಪಳಕ್ಕಾಗಿ ನಡೆದ ಗಲಾಟೆಯಲ್ಲಿ ಟೇಬಲ್ಸ್ ಮತ್ತು 25 ಕುರ್ಚಿಗಳಿಗೆ ಹಾನಿಯಾಗಿದ್ದು ಸೇರಿದಂತೆ ಕಲ್ಯಾಣ ಮಂಟಪಕ್ಕೆ ಸುಮಾರು 1.5 ಲಕ್ಷ ರೂಪಾಯಿ ನಷ್ಟವಾದ ಘಟನೆಯೊಂದು ಕೇರಳದ ಹರಿಪಾದದಲ್ಲಿ ನಡೆದಿದೆ
ಈ ಘಟನೆ ಭಾನುವಾರ (ಆ.28) ಮುತ್ತೊಮ್ನಲ್ಲಿ ನಡೆದಿದ್ದು, ಮದುವೆ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳವನ್ನು ಕೇಳಿದ್ದಾರೆ. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಗಲಾಟೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಲಾಟೆಯಲ್ಲಿ ಮಾಲೀಕರು ಸೇರಿದಂತೆ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.