ಸುಳ್ಯ: ಕಾಲೇಜು ವಿದ್ಯಾರ್ಥಿಗೆ ಥಳಿಸಿದ ಪ್ರಕರಣ| 9 ಮಂದಿ ಅರೆಸ್ಟ್

ಸಮಗ್ರ ನ್ಯೂಸ್: ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಪ್ರೀತಿಸುತ್ತಿದ್ದು, ಅನ್ಯಕೋಮಿನ ಜೋಡಿಯ ಮೇಲೆ ಎರಗಿದ ವಿದ್ಯಾರ್ಥಿಗಳ ಗುಂಪೊಂದು ಯುವಕನಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

Ad Widget ... ..

ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಯುವಕ ಸನೀಫ್ ಮತ್ತು ಅದೇ ಕಾಲೇಜಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿತ್ತು. ಇದರಿಂದ ಕೆರಳಿದ ವಿದ್ಯಾರ್ಥಿಗಳ ಗುಂಪೊಂದು ಮಂಗಳವಾರ ಕಾಲೇಜು ಮೈದಾನಕ್ಕೆ ಯುವಕನನ್ನು ಕರೆದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.

Ad Widget

ಸನೀಫ್​ನ ಕಾಲರ್ ಪಟ್ಟಿ ಹಿಡಿದು ಯುವತಿಯೊಂದಿಗೆ ಯಾಕೆ ಮಾತನಾಡುತ್ತೀಯಾ? ಇನ್ನು ಮುಂದೆ ಯುವತಿಯೊಂದಿಗೆ ಮಾತನಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಸನೀಫ್​ನ ಬೆನ್ನಿಗೆ ಬಾಸುಂಡೆಗಳು ಬರುವಂತೆ ಥಳಿಸಿದ್ದಾರೆ.

ಈ ಬಗ್ಗೆ ಸನೀಫ್ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಸೇರಿದಂತೆ ಒಟ್ಟು ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಚರಣ್, ಮತ್ತು ಪವನ್ ಹಲ್ಲೆಗೆ ಸಹಕರಿಸಿದವರು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆಯವರು ಮಾಹಿತಿ ನೀಡಿದ್ದು, ಈ ಆರೋಪಿಗಳ ವಿರುದ್ಧ ಐಪಿಸಿ ಕಲಂ 143, 147, 148.323.324.506 ಜೊತೆಗೆ 149ರಂತೆ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *