Ad Widget .

ಲಸಿಕೆ ಪಡೆದು ಸರ್ಟಿಫಿಕೇಟ್ ಸ್ಟೇಟಸ್ ಹಾಕುವ ಮುನ್ನ ಇರಲಿ ಎಚ್ಚರ…!

ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಕಾರ್ಯಕ್ರಮ ಹಂತ ಹಂತವಾಗಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ವ್ಯಾಕ್ಸೀನ್ ಪಡೆದವರು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಟ್ರೆಂಡ್ ಆಗಿ ಬಿಟ್ಟಿದೆ. ಇದೀಗ ಕೇಂದ್ರ ಗೃಹ ಸಚಿವಾಲಯ ಜನತೆಗೆ ಎಚ್ಚರಿಕೆಯ ಸಂದೇಶ ನೀಡಿದ್ದು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹಂಚಿಕೊಳ್ಳದಂತೆ ತಿಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಸ್ತುತ 18 ರಿಂದ 44 ವರ್ಷದವರಿಗೆ ಲಸಿಕೆ ನೀಡಲಾಗುತ್ತಿದೆ. ಈ ವಯಸ್ಸಿನ ಅವರೆಲ್ಲರೂ ಸ್ಮಾರ್ಟ್ಫೋನ್ ಉಳ್ಳವರಾಗಿದ್ದು, ಅಪಾಯವನ್ನು ಅರಿಯದೆ ಲಸಿಕೆ ಪಡೆದ ನಂತರ ಸರ್ಟಿಫಿಕೇಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ. ಲಸಿಕೆ ಪಡೆದ ಸರ್ಟಿಫಿಕೇಟ್ ಅನ್ನು ಶೇರ್ ಮಾಡುವುದರಿಂದ ಅಪಾಯ ಎದುರಾಗುವ ಸಾಧ್ಯತೆಗಳು ಇವೆ ಎಂದು ಸೈಬರ್ ಸೆಕ್ಯುರಿಟಿ ಎಚ್ಚರಿಕೆ ನೀಡಿದೆ.

Ad Widget . Ad Widget . Ad Widget .

ವ್ಯಾಕ್ಸಿನೇಷನ್ ಪ್ರಕ್ರಿಯೆಯ ನಂತರ ಜನರಿಗೆ ಹಾರ್ಡ್ ಹಾಗೂ ಸಾಫ್ಟ್ ಕಾಪಿ ಎರಡೂ ರೂಪದಲ್ಲಿ ಪ್ರಮಾಣಪತ್ರ ನೀಡಲಾಗುತ್ತದೆ. ವ್ಯಾಕ್ಸಿನೇಷನ್ ಮುಗಿದ ತಕ್ಷಣ, ಅದನ್ನು ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಪ್ರಮಾಣಪತ್ರದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ, ಕೋವಿಡ್ -19 ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ದಾಖಲಾದ ಲಸಿಕೆ ತೆಗೆದುಕೊಳ್ಳುವ ವ್ಯಕ್ತಿಯ ಹೆಸರು ಮತ್ತು ಇತರ ವೈಯಕ್ತಿಕ ಮಾಹಿತಿಯನ್ನು ಸೈಬರ್ ಕಳ್ಳರುದೋಚುವ ಅಪಾಯವಿದೆ. ಇದನ್ನು ತಪ್ಪಿಸುವ ಸಲುವಾಗಿ ಲಸಿಕೆ ಪ್ರಮಾಣಪತ್ರವನ್ನು ನಿಮ್ಮೊಂದಿಗೆ ಇಟ್ಟುಕೊಳ್ಳುವುದು ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡದಿರುವುದು ಒಳಿತು ಎಂದು ಗೃಹ ಸಚಿವಾಲಯ ಹೊರಡಿಸಿರುವ ನಿರ್ದೇಶನದಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *