ಸಮಗ್ರ ನ್ಯೂಸ್: ಮಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ಧಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರ ಭದ್ರತೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸರು, ವಿವಿಧ ಜಿಲ್ಲೆಗಳ ಪೊಲೀಸರು, ಎಎನ್‌ಎಫ್, ಕೆಎಸ್ಆರ್ಪಿ ಪೊಲೀಸರು ಸೇರಿದಂತೆ 3 ಸಾವಿರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಡಿಜಿಪಿ, ಎಡಿಜಿಪಿ ಸೇರಿದಂತೆ 100 ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
ಗೃಹಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ, ಭದ್ರತೆ ಪರಿಶೀಲನೆ ನಡೆಸಿದರು. ಎಡಿಜಿಪಿ ಅಲೋಕ್ ಕುಮಾರ್ ಅವರು ವೇದಿಕೆ ಸ್ಥಳದಲ್ಲಿ ಪೊಲೀಸರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ನಿರ್ದೇಶನ ನೀಡಿದರು.