ಸಮಗ್ರ ನ್ಯೂಸ್: ಜುಲೈ 26ರ ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಬೆನ್ನತ್ತಿ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.
ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದ 32 ಕಡೆ ಮನೆ, ಕಟ್ಟಡಗಳಿಗೆ ಮಿಂಚಿನ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.
ಸೆ.6ರ ಮುಂಜಾನೆ 6 ಗಂಟೆಗೆ ಸುಳ್ಯ ನಗರದ ನಾವೂರು ಬಳಿ ದಿಢೀರ್ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಘಟನೆಗೆ ಸಂಬಂಧಿಸಿದವರ ಮನೆಗಳಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ ತಿಳಿದು ಬಂದಿದೆ.
ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಭಾರೀ ಸುದ್ದಿಯಾಗಿದ್ದು, ಕೇಸರಿ ಪಾಳಯ ಪತರಗುಟ್ಟಿತ್ತು. ಇದರಿಂದ ರಾಜ್ಯ, ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಅಂದು ನೆಟ್ಟಾರಿಗೆ ಧಾವಿಸಿದ್ದರು.