Ad Widget .

ಕರ್ನಾಟಕದಲ್ಲಿ ಸೆ.7ರಿಂದ 9ರವರೆಗೆ ಭಾರೀ ಮಳೆ ಸಾಧ್ಯತೆ| ಕರಾವಳಿ, ಮಲೆನಾಡಿನಲ್ಲಿ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸೆ. 7ರಿಂದ ಸೆ. 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ 3 ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಹಳದಿ ಎಚ್ಚರಿಕೆ ನೀಡಲಾಗಿದೆ.

Ad Widget . Ad Widget . Ad Widget .

ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಅಪಾಯಕಾರಿ ಗಾಳಿ ಬೀಸುವ ಮುನ್ಸೂಚನೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಸುರಿಯುವ ನಿರೀಕ್ಷೆಯಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬೆಂಗಳೂರು ನಗರವು ಸೋಮವಾರ ತೀವ್ರ ಪ್ರವಾಹ ಮತ್ತು ಜಲಾವೃತಕ್ಕೆ ಸಾಕ್ಷಿಯಾಯಿತು. ಇದರಿಂದಾಗಿ ಕಂಪನಿಗಳ ಉದ್ಯೋಗಿಗಳು ಮತ್ತು ಸಾರ್ವಜನಿಕರು ಟ್ರ್ಯಾಕ್ಟರ್ ಮತ್ತು ದೋಣಿಗಳ ಸಹಾಯದಿಂದ ಪ್ರಯಾಣಿಸಿರುವ ವಿಡಿಯೋಗಳು ವೈರಲ್ ಅಗ್ತಿವೆ.

Leave a Comment

Your email address will not be published. Required fields are marked *