ಸಮಗ್ರ ನ್ಯೂಸ್ : ಕರ್ತವ್ಯ ನಿರತ ಹೆಡ್‌ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.
ನಗರದ ಲಾಡ್ಜ್ ಕೋಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಕಲ್ಯಾಣಿ ಗುಗ್ಗರಿ(45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಲ್ಯಾಣಿ, ಕಲಬುರಗಿ ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನಸ್ಟೇಬಲ್ ಆಗಿದ್ದರು.
ಅದಲ್ಲದೇ, ಕಳೆದ ರಾತ್ರಿ ಸುಸ್ತಾಗುತ್ತಿದ್ದರಿಂದ ಮಾತ್ರೆ ತೆಗೆದುಕೊಳ್ಳಲು ಲಾಡ್ಜ್ ನಲ್ಲಿದ್ದ ತಮ್ಮ ಕೋಣೆಗೆ ಹೋಗಿದ್ದರು.
ಎದೆ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದಿದ್ದರು. ಆದರೆ ನಸುಕಿನ ಜಾವ ನಾಲ್ಕು ಗಂಟೆ ಸಮಯದಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಹೋಗಲು ಆಂಬುಲೆನ್ಸ್ ಗೆ ಕರೆ ಮಾಡಿದ್ದ ಕಲ್ಯಾಣಿ, ಆಸ್ಪತ್ರೆಗೆ ಹೋಗುವ ಮುನ್ನವೇ ಮೃತಪಟ್ಟಿದ್ದಾರೆ.







