ಮಗಳ ಹುಟ್ಟುಹಬ್ಬದ ದಿನವೇ ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಗಳ ಹುಟ್ಟುಹಬ್ಬದ ದಿನವೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಆಂಧ್ರ ಪ್ರದೇಶದ ಅಲ್ಲೂರಿ ಸಿತಾರಾಮರಾಜು ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಆನ್​ ಲೈನ್ ಲೋನ್ ಆಯಪ್ ಮಾಲೀಕನ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತಿದೆ.

Ad Widget

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಅಧಿಕಾರಿಗಳು, ಕೊಳ್ಳಿ ದುರ್ಗ ರಾವ್ ಹಾಗೂ ರಮ್ಯಾ ಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 6 ವರ್ಷದ ಹಿಂದೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಇವರಿಗೆ ನಾಗ ಸಾಯಿ (4), ಲಿಖಿತಾ (2) ಎಂಬ ಮಕ್ಕಳಿದ್ದಾರೆ. ಕುಟುಂಬದಲ್ಲಿ ನಾಲ್ವರು ಮಾತ್ರ ಇದ್ದು, ರಾಜಮಹೇಂದ್ರವರಮ್​​ ನ ಶಾಂತಿ ನಗರದಲ್ಲಿ ವಾಸಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಮೃತ ದುರ್ಗಾ ರಾವ್ ಅವರು ವೃತ್ತಿಯಲ್ಲಿ ಪೇಟಂರ್ ಆಗಿದ್ದರು. ಇವರ ಪತ್ನಿ ಟೇಲರ್ ಆಗಿದ್ದರು. ಮನೆಯಲ್ಲಿ ಹಣಕಾಸು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಆನ್​ಲೈನ್​ ನ ಎರಡು ಲೋನ್ ಆಯಪ್​ ಗೆ ಅರ್ಜಿ ಸಲ್ಲಿಸಿದ್ದರು.

ಹಣ ಪಡೆದ ಅವರು, ಸಮಯಕ್ಕೆ ಸರಿಯಾಗಿ ಹಣವನ್ನು ಮರುಪಾವತಿ ಮಾಡಲು ಸಾಧ್ಯವಾಗಲಿಲ್ಲ. ಇದರಿಂದ ಲೋನ್ ಆಯಪ್​ ನವರು ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಆತ್ಮಹತ್ಯೆಗೆ ಮೊದಲು ಮೃತ ರಮ್ಯಾ ಅವರು, ನಮ್ಮಿಬ್ಬರ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ತನ್ನ ಸಂಬಂಧಿಗೆ ಹೇಳಿದ್ದಾರೆ.

ನಾವಿಬ್ಬರು ಸಾಯುತ್ತಿದ್ದೇವೆ ಎಂದು ವಾಟ್ಸ್​ ಆಯಪ್ ಮೂಲಕ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *