ಸುಳ್ಯ: ಆತ್ಮಹತ್ಯೆಗೆ ಶರಣಾದ ಯುವಕ; ಕಾರಣ ನಿಗೂಢ

ಸಮಗ್ರ ನ್ಯೂಸ್ : ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಯಲ್ಲಿ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.

Ad Widget ... ..

ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32) ಮನೆಯವರು ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ನೇಣು ಬಿಗಿದುಕೊಂಡಿದ್ದಾನೆ.

Ad Widget

ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಈತ ಸದ್ಯ ವರ್ಕ್ ಪ್ರಂ ಹೋಂ ನಲ್ಲಿ ಇದ್ದನೆಂದು ತಿಳಿದುಬಂದಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *