ಸಮಗ್ರ ನ್ಯೂಸ್: ಸುಳ್ಯ ತಾಲೂಕು ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆಯರ ಮನವಿಗೆ ಸ್ಪಂದಿಸಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸೆ.12ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಂತೋಡು ಗ್ರಾಮದ ನೆಕ್ಕರೆ ಎಂಬಲ್ಲಿ ರಸ್ತೆ ಅಭಿವೃದ್ಧಿಯ ಬಗ್ಗೆ ಮತ್ತು ಅರಮನೆ ಗಯ ಸೇತುವೆಯ ಬಗ್ಗೆ ಅಂಬೇಡ್ಕರ್ ರಕ್ಷಣೆ ವೇದಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ ಸಿ ಎಸ್ ಟಿ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಪಿಸುಂದರ ಪಾಟಾಜೆಯವರು ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಈ ಕಾರಣ ಇಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ರವಿಕುಮಾರ್ ಅವರು ನೆಕ್ಕರೆ ಮಲೆ ರಸ್ತೆಯ ಅಭಿವೃದ್ಧಿ ಬಗ್ಗೆ ಮತ್ತು ಅರಮನೆಗಯ ಸೇತುವೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸಹಾಯಕ ನಿರ್ದೇಶಕರು ರವಿಕುಮಾರ್ ಅವರು ಮಾತನಾಡಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ . ಸುಂದರ ಪಾಟಾಜೆಯವರು ಆದಷ್ಟು ಬೇಗ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಿಸಿ ಕೊಡಬೇಕೆಂದು ಸಮಾಜ ಕಲ್ಯಾಣ ಇಲಾಖೆಗೆ ಮನವಿ ಮಾಡಿದರು ಮತ್ತು ಮೊನ್ನೆ ನಡೆದಂತ ಎಸ್ ಸಿ ಎಸ್ ಟಿ ಕುಂದು ಕೊರತೆ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಿದ್ದಾರೆ. ಈ ಕಾರಣ ಇಂದು ನಾನು ಇಲ್ಲಿಗೆ ಬಂದಿದ್ದೇನೆ, ಇದನ್ನೆಲ್ಲ ರಿಪೋರ್ಟ್ ಮಾಡಿ ಆದಷ್ಟು ಬೇಗ ರಸ್ತೆ ಅಭಿವೃದ್ಧಿ ಮತ್ತು ಸೇತುವೆ ನಿರ್ಮಿಸಿ ಕೊಡುವಂತೆ ಮೇಲಾಧಿಕಾರಿಯವರಿಗೆ ರಿಪೋರ್ಟ್ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಅರೊಂತೋಡು ಗ್ರಾಮ ಘಟಕದ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಎಲ್ಲ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.