ಶಾಲೆಯಲ್ಲಿ ಬೆಳೆದ ಅಡಿಕೆ ಆದಾಯದಿಂದ ಶಾಲಾ ಮಕ್ಕಳಿಗಾಗಿ ಬಸ್ ಖರೀದಿಸಿದ ಸರ್ಕಾರಿ ಶಾಲೆ

ಬಂಟ್ವಾಳ : ಸುಮಾರು 628 ಅಡಿಕೆ ಮರಗಳು ನೀಡಿದ ಫಲದಿಂದ ದೊರೆತ ಆರ್ಥಿಕ ಆದಾಯದಿಂದ ಸರ್ಕಾರಿ ಶಾಲೆಯೊಂದು ಬಸ್ ಖರೀದಿ ಮಾಡಿ ಎಲ್ಲರ ಗಮನ ಸೆಳೆದಿದೆ.

Ad Widget ... ..

ತನ್ನ ಕೈತೋಟದ ಮೂಲಕ ಈಗಾಗಲೇ ಪ್ರಸಿದ್ಧಿ ಪಡೆದಿರುವ ಬಂಟ್ವಾಳ ತಾಲೂಕಿನ ಗಡಿಗ್ರಾಮಗಳಲ್ಲೊಂದಾದ ಮಿತ್ತೂರಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅದರಿಂದ ಲಭ್ಯವಾದ ಆದಾಯದಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಸ್ ಖರೀದಿಸಿದೆ.

Ad Widget

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಈ ಶಾಲೆಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಬಸ್​ಗೆ ಚಾಲನೆ ನೀಡಿ, ಶಾಲೆಗೆ ಮತ್ತಷ್ಟು ನೆರವುಗಳನ್ನು ಘೋಷಿಸಿದರು. ಇದೀಗ ಸೋಮವಾರ ಶಾಲೆ ಮಕ್ಕಳು ಬಸ್ಸು ಹತ್ತಿ ಶಾಲೆಗೆ ಆಗಮಿಸಿ ಸಂಭ್ರಮಪಟ್ಟರು.

Leave a Comment

Your email address will not be published. Required fields are marked *