ಸಮಗ್ರ ನ್ಯೂಸ್: ಹುಣಸೂರು ಲಕ್ಷ್ಮಣತೀರ್ಥ ನದಿಯ ಕಟ್ಟೆಮಳಲವಾಡಿ ಅಣೆಕಟ್ಟೆ ಬಳಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ದಾವಣಿ ಬೀದಿಯ ನಿತ್ಯಾನಂದರ ಪುತ್ರ, ಸ್ಟೋರ್ ಬೀದಿ ನಿವಾಸಿ ರಾಘವೇಂದ್ರ(24)ರ ಶವ ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು, ಈತನ ಪಲ್ಸರ್ ಬೈಕ್, ಮೊಬೈಲ್, ಪರ್ಸ್,ಪಾನ್ಕಾರ್ಡ್, ಡಿ.ಎಲ್. ಚಿಕ್ಕಹುಣಸೂರು ಹಳೇ ಊರಿನ ನದಿಯ ಬಳಿಯ ಜಮೀನಿನಲ್ಲಿ ಪತ್ತೆಯಾಗಿತ್ತು.
ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಎಸ್.ಐ.ರಾಧಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಘವೇಂದ್ರರ ಪತ್ನಿ ರಂಜಿತಾ ಪತಿಯ ಸಾವು ಅನುಮಾನಾಸ್ಪದವಾಗಿದೆ ಎಂದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಶವವನ್ನು ಕೆ.ಆರ್.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತ ರಾಘವೇಂದ್ರರಿಗೆ ಪತ್ನಿ, ಇಬ್ಬರು ಪುಟ್ಟಮಕ್ಕಳಿದ್ದಾರೆ.