ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಬ್ರೇಕ್ ಬೀಳಲಿದೆ. ಯಾಕೆಂದರೆ ವಿಧಾನ ಪರಿಷತ್‍ನಲ್ಲಿ ಮತಾಂತರ ನಿಷೇಧ ವಿಧೇಯಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಧಾನಸಭೆಯಿಂದ ಅಂಗೀಕಾರವಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2022ನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನ ಪರಿಷತ್‌ನಲ್ಲಿ ಇಂದು ಮಂಡನೆ ಮಾಡಿದರು.
ವಿಧೇಯಕ ಅಂಗೀಕಾರವಾಗಿದ್ದು ಮತ್ತೊಂದೆಡೆ ಮತಾಂತರ ನಿಷೇಧ ವಿಧೇಯಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಬಿಲ್‌ನ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಮತಾಂತರ ತಡೆ ಕಾಯ್ದೆ ವಿಧೇಯಕ ಇವತ್ತು ಪರಿಷತ್ನಲ್ಲಿ ಮಂಡನೆಯಾಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ದು ಬಹಳ ಮಹತ್ವದ ಕಾಯ್ದೆಯನ್ನು ರಾಜ್ಯ ಸರ್ಕಾರ ತಂದಿದೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿತ್ತು. ಈಗ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ.