ಸಮಗ್ರ ನ್ಯೂಸ್: ‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.26 ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದು, ಹುಬ್ಬಳ್ಳಿ-ಧಾರವಾಡ ಜನತೆಯ ಪರವಾಗಿ ಮಹಾನಗರ ಪಾಲಿಕೆ ವತಿಯಿಂದ ಪೌರ ಸನ್ಮಾನ ನೀಡಲಾಗುತ್ತದೆ.
ಐತಿಹಾಸಿಕ ದಸರಾ ಉದ್ಘಾಟನೆಗಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ 26ರಂದು ಭೇಟಿ ನೀಡಲಿರುವ ಅವರು, ಆ ನಂತರ ಹುಬ್ಬಳ್ಳಿಗೆ ಬರಲಿದ್ದಾರೆ.
ಪೌರ ಸನ್ಮಾನ ನಡೆಯಲಿರುವ ಇಲ್ಲಿನ ಜಿಮ್ಖಾನ ಮೈದಾನಕ್ಕೆ ಶುಕ್ರವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮೇಯರ್ ಈರೇಶ ಅಂಚಟಗೇರಿ, ಪೊಲೀಸ್ ಆಯುಕ್ತ ಲಾಭೂ ರಾಮ್ ಭೇಟಿ ನೀಡಿ ಪರಿಶೀಲಿಸಿದರು. ಸಿದ್ಧತೆ ಕುರಿತು ಚರ್ಚಿಸಿದರು.
‘ಪೌರ ಸನ್ಮಾನ ಸ್ವೀಕರಿಸಲು ಕೋರಿ ಪತ್ರವನ್ನು ಬರೆಯಲಾಗಿತ್ತು. ಅದಕ್ಕೆ ಅವರು ಸಮ್ಮತಿಸಿದ್ದಾರೆ ಇದೇ ಮೊದಲ ಬಾರಿಗೆ ಪಾಲಿಕೆಯಿಂದ ರಾಷ್ಟ್ರಪತಿ ದ್ರೌಪದಿ ಅವರಿಗೆ ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ’