ಉಳ್ಳಾಲ: ಬೈಕ್ ಸ್ಕಿಡ್ | ಸವಾರ ಮೃತ್ಯು, ಸಹ ಸವಾರ ಗಂಭೀರ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ನಸುಕಿನ ವೇಳೆ ನಡೆದಿದೆ.

Ad Widget ... ..

ಮೃತರನ್ನು ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್, ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿರುವ ಪ್ರತಾಪ್ ಶೆಟ್ಟಿ (32) ಎಂದು ಗುರುತಿಸಲಾಗಿದೆ.

Ad Widget

ಇನ್ನು ಪ್ರತಾಪ್ ಶೆಟ್ಟಿ ಅವರ ಚಿಕ್ಕಮ್ಮನ ಮಗ, ವೈನ್ ಆ್ಯಂಡ್ ಡೈನ್ ಬಾರ್ ಕೌಂಟರ್ ಬಾಯ್ ಆಗಿರುವ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *