ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಉಗ್ರರ ಕರಿನೆರಳು ಬಿದ್ದಿದ್ದು, ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಉಗ್ರ ಸಂಘಟನೆಯ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ.
ಶಾರಿಕ್, ಮಾಜ್ ಹಾಗೂ ಸೈಯದ್ ಯಾಸಿನ್ ಬಂಧಿತ ಶಂಕಿತ ಉಗ್ರರು. ಉಗ್ರ ಸಂಘಟನೆಯ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಮೂವರು ಭಯೋತ್ಪಾದಕ ಕೃತ್ಯಕ್ಕೆ ಒಳಸಂಚು ನಡೆಸಿದ್ದರು. ಇದೇ ಉದ್ದೇಶಕ್ಕಾಗಿ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೂವರನ್ನು ಬಂಧಿಸಲಾಗಿದೆ.
ಕಿಂಗ್ ಪಿನ್ ಯಾಸಿನ್ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿರುವ ಶಿವಮೊಗ್ಗ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಬಂಧಿತ ಮೂವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅಲ್ಲದೇ ಯುಎಪಿಎ ಕೇಸ್ ದಾಖಲಿಸಿ ತನಿಖೆ ತೀವ್ರಗೊಳಿಸಲಾಗಿದೆ.