ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಉಡುಪಿ: ಮೀನಿನ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆಯೊಂದು ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

Ad Widget ... ..

ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ.

Ad Widget


ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ.

ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *