“PAY CM” ಪೋಸ್ಟರ್ ಅಂಟಿಸಿದ ಕೈ ನಾಯಕರು| ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ವಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ PAYCM ಪೋಸ್ಟರ್‌ ವಿವಾದ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ರೇಸ್‌ಕೋರ್ಸ್‌ ರಸ್ತೆಯಿಂದ ಕ್ಯಾಂಪೇನ್ ಶುರುವಾಗಿದ್ದು, ಪೋಸ್ಟರ್‌ ಅಂಟಿಸಿದ ಬೆನ್ನಲ್ಲೆ ಪೊಲೀಸರು ಪೋಸ್ಟರ್‌ ಹರಿದು ಹಾಕಿದ್ದಾರೆ.

Ad Widget ... ..

ರೇಸ್‌ಕೋರ್ಸ್‌ ರಸ್ತೆಯ ಕಾಂಪೌಂಡ್‌ಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ PAYCM ಪೋಸ್ಟರ್‌ ಅಂಟಿಸುತ್ತಿದ್ದಂತೆ, ಪೊಲೀಸರ ಹರಿದು ಹಾಕಿದ್ದಾರೆ. ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Ad Widget

ಈ ಸರ್ಕಾರ 40% ಭ್ರಷ್ಟಾಚಾರ ನಡೆಸುತ್ತಿದೆ. ಸರ್ಕಾರ ಪೊಲೀಸರನ್ನು ಬಳಸಿಕೊಂಡು ನಮ್ಮ ಪೋಸ್ಟರ್‌ ಹರಿದು ಹಾಕಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತರಕ ಘಟನೆ ನಡೆಯದಂತೆ ಎಚ್ಚರಿಕೆ ನೀಡಲಾಗಿದೆ.

Leave a Comment

Your email address will not be published. Required fields are marked *