ಸಮಗ್ರ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆಯಾಗಿದ್ದು, ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ-ಎಸ್‌ಟಿ-ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಇಡಲಾಗಿದೆ.
ಅರ್ಜಿ ಸಲ್ಲಿಕೆ 05-10-2022 ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 04-11-2022. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750 ನಿಗದಿ ಮಾಡಲಾಗಿದೆ. ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500 ನಿಗದಿ ಮಾಡಲಾಗಿದೆ. ಇನ್ನು ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 06-10-2022. ಅರ್ಜಿ ಸಲ್ಲಿಕೆಗೆ ಅಧಿಕೃತ ಲಿಂಕ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 26 ರಂದು ಬಿಡುಗಡೆ ಮಾಡಲಾಗುತ್ತದೆ.