ಸಮಗ್ರ ನ್ಯೂಸ್: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ ಮಹತ್ವದ ಆದೇಶ ಮಾಡಲಾಗಿದೆ.
ಅಕ್ಟೋಬರ್ 2ರಿಂದ 20ರವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಹಮ್ಮಿಕೊಂಡಿರುವ ರಾಜ್ಯ ಸರ್ಕಾರ ತನ್ನ ಮೇಲಿನ ಆರೋಪ ಮುಕ್ತವಾಗಲು ಹೊರಟಿದೆ. ಈ ಅಭಿಯಾನ ವರ್ಷವಿಡಿ ನಡೆಯಲಿ ಎಂಬ ಬಗ್ಗೆ ಜನ ಆಗ್ರಹ ವ್ಯಕ್ತವಾಗುತ್ತಿದೆ.
ಸರ್ಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ ಲಂಚ, ಭ್ರಷ್ಟಾಚಾರ ಇದೆ ಎಂದು ಒಪ್ಪಿಕೊಂಡಂತಿದೆ. ಕಾಂಗ್ರೆಸ್ ನ ಆರೋಪವನ್ನು ಒಪ್ಪಿಕೊಂಡು ಅದರಿಂದ ಮುಕ್ತವಾಗಲು ಸರ್ಕಾರ ಮುಂದಾಗಿರುವಂತಿದೆ.