ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಯಿಂದ 108 ಅಂಬುಲೆನ್ಸ್ ದೂರವಾಣಿ ಕರೆಗಳು ಸಂಪರ್ಕಕ್ಕೆ ಬರದೇ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸೇವೆಗಾಗಿ ಪರ್ಯಾಯ ವ್ಯವಸ್ಥೆ ಮಾಡಿದ್ದು,108 ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುರೇಶ ಚವ್ಹಾಣ್ ಅವರು ತಿಳಿಸಿದ್ದಾರೆ.
ಅಂಬುಲೆನ್ಸ್ ಸೇವೆಗಾಗಿ ಪೂರಕವಾಗಿ ಮತ್ತು ಪರ್ಯಾಯ ವ್ಯವಸ್ಥೆಯ ಕ್ರಮ ತೆಗೆದುಕೊಳ್ಳಲಾಗಿದೆ. 108 ಅಂಬುಲೆನ್ಸ್ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ 9740376964ಗೆ ಕರೆ ಮಾಡಿ ತುರ್ತು ಆರೋಗ್ಯ ಸೇವೆಯನ್ನು ಪಡೆಯಬೇಕು. ಒಂದು ವೇಳೆ ಇವರ ದೂರವಾಣಿ ಸಂಪರ್ಕಕ್ಕೆ ಬರದೇ ಇದ್ದ ಸಮಯದಲ್ಲಿ ಆಯಾ ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬೇಕು.
ಇಂಡಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 99725669345., ಮುದ್ದೆಬೀಹಾಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 9380747482, ಸಿಂದಗಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 7259995853., ಬಸವನ ಬಾಗೇವಾಡಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ಪತ್ರೆ ದೂರವಾಣಿ ಸಂಖ್ಯೆ: 9448920612 ಗೆ ಸಂಪರ್ಕಿಸಬೇಕು ಎಂದು ಡಿಎಚ್‌ಓ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.