ಮಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ‌ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Ad Widget ... ..

ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದ್ದು, ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *