ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ.
ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಇದು ವಿವಾದಕ್ಕೆ ಕಾರಣವಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.