ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಉಂಟಾಗಿದ್ದು, ಭಯಗೊಂಡ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪದ ಅನುಭವವಾಗುತ್ತಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಭಾರಿ ಸ್ಫೋಟದ ಸದ್ದಿನೊಂದಿಗೆ ಕೆಲ ಕಾಲ ಭೂಮಿ ನಡುಗಿದ್ದು, ಭಯಭೀತರಾದ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ನೈಸರ್ಗಿಕ ವಿಕೋಪ ಕೇಂದ್ರ ಜಿಲ್ಲೆಯಲ್ಲಿ ಭೂಕಂಪವಾಗಿರುವುದನ್ನು ಖಚಿತಪಡಿಸಿದೆ.
ವಿಜಯಪುರ ಹೊರವಲಯದಲ್ಲಿನ ಆಲಿಯಾಬಾದ್ ನಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. 2.5ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ 8 ಕಿ.ಮೀ ಆಳದಲ್ಲಿ ಈ ಭೂಕಂಪ ಸಂಭವಿಸಿದೆ ಎಂದು ನೈಸರ್ಗಿಕ ವಿಕೋಪ ಕೇಂದ್ರ ತಿಳಿಸಿದೆ.