Ad Widget .

ಸುಳ್ಯದಲ್ಲಿ ಪಿಎಫ್ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡ್ತಿತ್ತು| ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರಿನಲ್ಲಿ, ಪಿಎಫ್​​ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದ ಜಾಗದ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಕೆಲವು ಮಾಹಿತಿ ಸಿಕ್ಕಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದರು.

Ad Widget . Ad Widget . Ad Widget .

ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ದೇಶಾದ್ಯಂತ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮೇಲೆ ಎನ್​ಐಎ ಮತ್ತು ಪೊಲೀಸರು ನಡೆಸಿದ ದಾಳಿಯಲ್ಲಿ ಅನೇಕರನ್ನು ಬಂಧಿಸಲಾಗಿದ್ದು, ಕೇಂದ್ರ ಸರ್ಕಾರ ಐದು ವರ್ಷ ಸಂಘಟನೆಯನ್ನು ನಿಷೇಧಿಸಿದೆ. ಅಲ್ಲದೆ ಬಂಧಿತ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದ್ದು,

ಆಘಾತಕಾರಿ ಮಾಹಿತಿಗಳು ಒಂದೊಂದಾಗಿಯೇ ಹೊರಬೀಳುತ್ತಿದೆ. ಈ ಪೈಕಿ ಕಾರ್ಯಕರ್ತರಿಗೆ ಉಗ್ರ ಮಾದರಿಯ ತರಬೇತಿ ನೀಡುತ್ತಿದ್ದ ಸಂಗತಿಯೂ ಒಂದಾಗಿದೆ. ಪರೇಶ್ ಮೇಸ್ತ ಸಾವು ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್​​ ಸಲ್ಲಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಪರೇಶ್ ತಂದೆ ಕೋರ್ಟ್​​ ಮೊರೆ ಹೋಗುವುದಾಗಿ ಹೇಳಿದ್ದಾರೆ. ಮಗನನ್ನು ಕೊಂದು ತಂದು ಹಾಕಿದ್ದಾರೆ ಅಂತ ಹೇಳಿದ್ದಾರೆ. ಪರೇಶ್ ಮೇಸ್ತ ಪ್ರಕರಣದ ಬಗ್ಗೆ ಮತ್ತೆ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *