Ad Widget .

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್

ಸಮಗ್ರ ನ್ಯೂಸ್: ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆಕ್ಟೋಬರ್ 8 ರಂದು ಈ ಕೃತ್ಯ ನಡೆದಿದ್ದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿದ್ದರು. ಇದರಿಂದ ಮಂಗಳೂರಿನಲ್ಲಿ ಮತ್ತೆ ಕೋಮು ಭಾವನೆ ಹರಡುವ ಸಂಚನ್ನು ರೂಪಿಸಲಾಗಿತ್ತು ಎನ್ನಲಾಗಿದೆ.

Ad Widget . Ad Widget . Ad Widget .

ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಘಟನೆಯನ್ನು ಖಂಡಿಸಿ ಸಮಾನ ಮನಸ್ಕ ಹಿಂದು ಸಂಘಟನೆಗಳಿಂದ ಮಂಗಳವಾರ ಸಂತೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿತ್ತು. ಶಾರದಾ ಮಹೋತ್ಸವದ ಅಂಗವಾಗಿ ಹಾಕಲಾಗಿದ್ದ ವಾಮಂಜೂರ್ ಹುಲಿ ಯ ಫ್ಲೆಕ್ಸನ್ನು ನಾಶಮಾಡಿದ ಆರೋಪಿಗಳನ್ನು ಘಟನೆ ನಡೆದು ನಾಲ್ಕು ದಿನಗಳಾದರೂ ಆರೋಪಿಗಳನ್ನು ಬಂಧನವಾಗದ್ದಕ್ಕೆ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

Leave a Comment

Your email address will not be published. Required fields are marked *