ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದು ವಾಹನ ಪರಾರಿ; ವೃದ್ದ ಸಾವು

ಸಮಗ್ರ ನ್ಯೂಸ್: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವೃದ್ಧರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ಧರ್ಮಸ್ಥಳದ ಶಾಂತಿವನದ ಸಮೀಪ ನಡೆದಿದೆ.

Ad Widget ... ..

ಡಿಕ್ಕಿಯ ರಭಸಕ್ಕೆ ವೃದ್ಧನಿಗೆ ಗಂಭೀರ ಗಾಯವಾಗಿ ರಸ್ತೆ ಬದಿಯಲ್ಲಿ ಬಿದ್ದಿದ್ದು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

ಮೃತ ಅಪರಿಚಿತ ವ್ಯಕ್ತಿ ವಯಸ್ಸು 50ರಿಂದ 60 ವರ್ಷ ಎಂದು ಅಂದಾಜಿಸಲಾಗಿದೆ. ಅವರ ವಿಳಾಸದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ .ಡಿಕ್ಕಿ ಹೊಡೆದ ವಾಹನ ಚಾಲಕ, ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

Leave a Comment

Your email address will not be published. Required fields are marked *