ಬೆಂಗಳೂರು: ಕೊರೊನಾಗೆ ತುತ್ತಾಗಿ ಮೃತ್ತಪಟ್ಟವರ ಮಕ್ಕಳಿಗೆ ಬಾಲ ಸೇವಾ ಯೋಜನೆಯಡಿ ಮಾಸಿಕ 3,500 ರೂ. ಹಾಗು ಹಲವು ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ತಂದೆ-ತಾಯಿ ಕಳೆದುಕೊಂಡು ತಬ್ಬಲಿಯಾದ ಮಕ್ಕಳ ಕಲ್ಯಾಣಕ್ಕಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಯೋಜನೆಯ ಪ್ರಕಾರ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ ನೀಡಲಾಗುವುದು
ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿಯಲ್ಲಿ ಆಶ್ರಯ ನೀಡಲಾಗುವುದು. ಮಕ್ಕಳನ್ನು ವಸತಿ ಶಾಲೆಗಳಿಗೆ ಸೇರ್ಪಡೆಗೊಳಿಸಿ ಗುಣಮಟ್ಟದ ಶಿಕ್ಷಣ ಕೊಡಿಸುವುದು. ಈಗಾಗಲೆ 10 ನೇ ತರಗತಿ ಪೂರೈಸಿದ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್, ಟ್ಯಾಬ್ ನೀಡಲಾಗುವುದು. 21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ, ಉನ್ನತ ಶಿಕ್ಷಣ ಮತ್ತು ಮದುವೆಗೆ ನೆರವು ನೀಡಲಾವುದು ಮತ್ತು ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಿಸಿ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದೆಂದು ಸಿ.ಎಂ. ತಿಳಿಸಿದ್ದಾರೆ.