ಸಮಗ್ರ ನ್ಯೂಸ್: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಕೆಲವರು ಅವಶೇಷಗಳಡಿ ಸಿಲುಕಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಸಮಯದಲ್ಲಿ, ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು ಮಾಹಿತಿ ನೀಡಿದ್ದಾರೆ. ಮೀಥೇನ್ ಸ್ಫೋಟದಿಂದಾಗಿ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.