ಸಮಗ್ರ ನ್ಯೂಸ್: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿರುವ ಕಾರಣ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ.
ಮಧ್ಯೆ ಹೈದರಾಬಾದಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸಿಖ್ ರು ಪಗಡಿ, ಹಿಂದೂಗಳು ವಿಭೂತಿ ಧಾರಣೆ ಮಾಡುತ್ತಾರೆ. ಆದರೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಬಾರದು ಎಂದು ಹೇಳುತ್ತಾರೆ. ಹಾಗಾದರೆ ಅವರು ಹಿಜಾಬ್ ಅಲ್ಲದೆ ಬಿಕಿನಿ ಧರಿಸಿಕೊಂಡು ಬರಬೇಕೇ ಎಂದು ವ್ಯಂಗ್ಯವಾಡಿದ್ದಾರೆ.