ಸಮಗ್ರ ನ್ಯೂಸ್: ಜನಪ್ರಿಯ ಟಿವಿ ಸೀರಿಯಲ್ ನಟಿ ವೈಶಾಲಿ ಟಕ್ಕರ್ ಇಂದೋರ್’ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೇಜಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ.
ಹಿಂದಿಯ ʼಸಸುರಾಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು.
ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವರದಿ ತಿಳಿಸಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನಟಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.



























