ಸಮಗ್ರ ನ್ಯೂಸ್: ಬೆಟ್ಟದ ಮೇಲೆ 15ಕಟ್ಟೆಗಳನ್ನು ಕಟ್ಟುವ ಮೂಲಕ ಪ್ರಸಿದ್ದಿ ಪಡೆದಿದ್ದ ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ(83) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಮೃತರು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದರು. ವೃತ್ತಿಯಲ್ಲಿ ಕುರಿಗಾಹಿ ಆಗಿದ್ದ ಇವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿ ಪ್ರತಿ ಕಟ್ಟೆಗೂ ದೇವರ ಹಾಗೂ ತಮ್ಮ ಮೊಮ್ಮಕ್ಕಳ ಹೆಸರನ್ನು ಇಟ್ಟಿದ್ದರು.
ಪರಿಸರ ಸಂರಕ್ಷಣೆಗಾಗಿ ಪಣ ತೊಟ್ಟಿದ ಇವರು ಬೆಟ್ಟದ ಮೇಲಿನ ಕಟ್ಟೆಗಳನ್ನು ಸಂರಕ್ಷಿಸುತ ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿಗಳನ್ನು ನೆಟ್ಟು ಪರಿಸರದ ಬಗ್ಗೆ ಕಾಳಜಿ ಮೆರೆದಿದ್ದರು.
ಕಾಮೇಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.