ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ

ಸಮಗ್ರ ನ್ಯೂಸ್: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ.

Ad Widget ... ..

ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Ad Widget

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *