ಸಮಗ್ರ ನ್ಯೂಸ್: ಪರೇಶ್ ಮೇಸ್ತ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪರೇಶ್ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ.
ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ.
ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಆತನ ಸಾವಿಗೆ ಸಂಬಂಧಪಟ್ಟಂತೆ ಆಗ ಕರಾವಳಿ ಭಾಗದಲ್ಲಿ ದೊಡ್ಡ ಬಿರುಗಾಳಿಯನ್ನು ಹಬ್ಬಿಸಿತ್ತು. ಇದಲ್ಲದೇ ಕೆಲ ರಾಜಕೀಯ ಪಾರ್ಟಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕೋಮು ಸೌಹರ್ದತೆಗೆ ದಕ್ಕೆ ತಂದಿದ್ದವು ಕೂಡ, ಇವೆಲ್ಲದರ ನಡುವೆ ಆಗಿನ ಸಿಎಂ ಸಿದ್ದರಾಮಯ್ಯ ಅವರು ಇದನ್ನು ಸಿಬಿಐ ಗೆ ಒಪ್ಪಿಸಿದ್ದರು.
ಪರೇಶ್ ಮೇಸ್ತಾ ಅವರ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು ಎಂದು ಅಂದಿನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿರೋಧ ಪಕ್ಷಗಳ ಹೋರಾಟಕ್ಕೆ ಮಣಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಪೋಷಕರ ಒತ್ತಾಯದ ಮೇರೆಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.
ನಾಲ್ಕೂವರೆ ವರ್ಷಗಳ ಕಾಲ ತನಿಖೆ ನಡೆಸಿದ ನಂತರ ಸಿಬಿಐ ತನ್ನ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ.