ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಯಾತ್ರಾರ್ಥಿಗಳಿಗೆ ಮಹತ್ವದ ಸೂಚನೆ| ಗ್ರಹಣ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget ... ..

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

Ad Widget

ಅನ್ನಪ್ರಸಾದವು ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ಬಳಿಕವೆ ನಡೆಯಲಿದೆ. ಅಕ್ಟೋಬರ್ 25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅಕ್ಟೋಬರ್ 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಕ್ಟೋಬರ್ 25ರಂದು ಸೂರ್ಯಗ್ರಹಣ ಇರುವುದರಿಂದ ಆ ದಿನ ಯಾವುದೇ ಸೇವೆಗಳು, ಭೋಜನ ಪ್ರಸಾದ ವ್ಯವಸ್ಥೆ ಇರುವುದಿಲ್ಲ. ಗ್ರಹಣಾ ನಂತರದಲ್ಲಿ ಶುದ್ದಾದಿ ಕಾರ್ಯಗಳು ನಡೆದ ಬಳಿಕ ಸೇವಾದಿ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *