Ad Widget .

ರೈತ ಸಮುದಾಯಕ್ಕೆ‌ ಗುಡ್ ನ್ಯೂಸ್ ನೀಡಿದ ಸಚಿವ ಸುನಿಲ್‌ಕುಮಾರ್| 3.5 ಲಕ್ಷ ಜನರಿಗೆ ಉಚಿತ ಸೌರ ವಿದ್ಯುತ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಸುಮ್ ಯೋಜನೆಯಡಿ ರಾಜ್ಯದ ಸುಮಾರು 3.50 ಲಕ್ಷ ರೈತರಿಗೆ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಘೋಷಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 3.50 ಲಕ್ಷ ರೈತಗರಿಗೆ ಉಚಿತವಾಗಿ ಸೌರ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕೇಂದ್ರ ಸರ್ಕಾರದ ಸಹಾಯದಿಂದ ಅನುಷ್ಠಾನಗೊಳಿಸಲಾಗುವ ಈ ಯೋಜನೆಯಡಿ ರಾಜ್ಯದಲ್ಲಿ 1,000 ಮೆಗಾ ವ್ಯಾಟ್ ಸಾಮರ್ಥ್ಯದ 1,000 ಸೋಲಾರ್ ಫೀಡರ್ ಗಳನ್ನು ಸ್ಥಾಪನೆ ಮಾಡಲಾಗುವುದು. ಇವುಗಳಿಂದ ಉಚಿತ ಸೌರ ವಿದ್ಯುತ್ ಪೂರೈಕೆ ಮಾಡಲಾಗುವುದು ಇದರಿಂದ 7 ಗಂಟೆ ನಿರಂತರ ವಿದ್ಯುತ್ ಪೂರೈಕೆಯಾಗಲಿದೆ ಎಂದರು.

Ad Widget . Ad Widget . Ad Widget .

ಇನ್ನು ರಾಜ್ಯದಲ್ಲಿ 3 ತಿಂಗಳಿಗೊಮ್ಮೆ ವಿದ್ಯುತ್ ಬೆಲೆ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಕಲ್ಲಿದ್ದಲು ಮತ್ತು ತೈಲ ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ಬೆಲೆ ಕೂಡ ಇಳಿಕೆಯಾಗುತ್ತದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *