ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ| ಶಿವಮೊಗ್ಗ ಮತ್ತೆ ಉದ್ವಿಗ್ನ

ಸಮಗ್ರ ನ್ಯೂಸ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ವಿಕ್ರಂ ಆಮ್ಟೆ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಸಮಾಧಾನಪಡಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಧರ್ಮಪ್ಪ ನಗರ ಮತ್ತು ಸೀಗೆಹಟ್ಟಿಯಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದ್ದು, ರಾತ್ರಿ ಬೀಟ್ ಕೂಡ ಹೆಚ್ಚಿಸಲಾಗಿದೆ.

ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಹಿಂದು ಹರ್ಷನ ಸಹೋದರಿ ಅಶ್ವಿನಿ, ಮೂರು ಬೈಕ್‌ಗಳು ಭರ್ಮಪ್ಪ ನಗರದಿಂದ ಓಟಿ ರಸ್ತೆ ಕಡೆಗೆ ಹೋಗುವುದನ್ನು ನೋಡಿರುವುದಾಗಿ ಹೇಳಿದ್ದಾರೆ. ಬೈಕ್‌ನಲ್ಲಿ ಹೋಗುವಾಗ ಸೀಗೆಹಟ್ಟಿಯ ರಸ್ತೆ ಪಕ್ಕ ನಿಂತಿದ್ದ ಬೈಕ್‌ಗಳಿಗೆ ಗುದ್ದಿದ್ದಾರೆ. ಓರ್ವ ಮಹಿಳೆಯ ಮುಖಕ್ಕೂ ಹೊಡೆದಿದ್ದಾರೆ. ಬಿಡೊಲ್ಲ ಅಂತ ಕೂಗುತ್ತ ಹೋಗುವುದನ್ನು ಮನೆಯ ಓಣಿಯಲ್ಲಿ ನಿಂತಿದ್ದಾಗ ನೋಡಿರುವುದಾಗಿ ಅಶ್ವಿನಿ ಮತ್ತು ಅವರ ತಾಯಿ ಪದ್ಮಾ ತಿಳಿಸಿದ್ದಾರೆ.

Leave a Comment

Your email address will not be published. Required fields are marked *