ಸಮಗ್ರ ನ್ಯೂಸ್: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಜಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೇಖಾ (30) ಪತಿಯಿಂದ ಕೊಲೆಯಾದ ಮಹಿಳೆ. ಕುಮಾರಸ್ವಾಮಿ (35) ಆತ್ಮಹತ್ಯೆಗೆ ಶರಣಾದ ಪತಿ. 12 ವರ್ಷದ ಹಿಂದೆ ರೇಖಾಳನ್ನ ಮದುವೆಯಾಗಿದ್ದ ಕುಮಾರಸ್ವಾಮಿಗೆ 5 ಜನ ಮಕ್ಕಳಿದ್ದಾರೆ.
ಹಾಗಿದ್ದರೂ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡು ಕುಮಾರಸ್ವಾಮಿ, ಜಿಗೇನಹಳ್ಳಿ ಗ್ರಾಮದ ಜಮೀನಿಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದುರಂತ ಘಟನೆಯಿಂದ ಐದು ಮಕ್ಕಳು ಅನಾಥವಾಗಿದ್ದು, ಚೋರನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.