Ad Widget .

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ.

Ad Widget . Ad Widget . Ad Widget .

ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ ಯೂಸೂಫ್, ಹಕೀಮ್ ಹಾಗೂ ಸಿರಾಜ್ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದರು. ಅರ್ಕುಳದಲ್ಲಿ ಬತೀಷ್ ಎಂಬಾತ ಕಸಾಯಿಖಾನೆ ನಡೆಸುತ್ತಿದ್ದ. ಈ ಕಸಾಯಿಖಾನೆ ಹಾಗೂ ಅದಕ್ಕೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕೋರ್ಟ್ ಈ ಪ್ರಕರಣವನ್ನು ಇತ್ಯರ್ಥಪಡಿಸುವವರೆಗೂ ಕಸಾಯಿಖಾನೆಗಳಿದ್ದ ಕಟ್ಟಡದ ಮಾಲಿಕರು ಅದನ್ನು ಮಾರಾಟ ಮಾಡುವಂತಿಲ್ಲ ಎಂದು ಮಂಗಳೂರು ತಹಶಿಲ್ದಾರ್ ಹೇಳಿದ್ದಾರೆ.

Leave a Comment

Your email address will not be published. Required fields are marked *