ಸುಳ್ಯ: ಗ್ರಾ.ಪಂ ಪಿಡಿಒ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಪಿಡಿಒ ಒಬ್ಬರು ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಸುಳ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತಕ್ಕೆ ಬಲಿಯಾದವರು.

Ad Widget ... ..

ಇವರಿಗೆ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

Ad Widget

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು‌ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು. ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *