ಪ್ರಧಾನಿ ಭಾಷಣದ ವೇಳೆ ಪೆಂಡಾಲ್ ನಿಂದ ಬೋಲ್ಟ್ ತೆಗೆದ ಭೂಪ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಗುಜರಾತ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡುತ್ತಿರುವಾಗಲೇ ಸಾರ್ವಜನಿಕವಾಗಿ ಹಾಕಲಾದ ಪೆಂಡಾಲ್‌ನಿಂದ ಬೋಲ್ಟ್ ಅನ್ನು ತೆಗದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

Ad Widget ... ..

ಕಳೆದ ಅಕ್ಟೋಬರ್ 31ರಂದು ಥರಾಡ್‌ನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯಲ್ಲಿನ ವಿಡಿಯೋವೊಂದು ವೈರಲ್ ಆಗಿತ್ತು.

Ad Widget

ಒಂದು ಕಡೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದರೆ, ಇನ್ನೊಂದು ಮಗ್ಗಲಿನಲ್ಲಿ ಸಾರ್ವಜನಿಕ ಸಭೆಗಾಗಿ ಹಾಕಿದ್ದ ಮಂಟಪದ ಬೋಲ್ಟ್ ಅನ್ನು ಬಿಚ್ಚಿ, ತೆಗೆಯುತ್ತಿರುವುದು ವಿಡಿಯೋದಲ್ಲಿ ಗೋಚರಿಸಿತು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು.

ವಿಡಿಯೋ ವೈರಲ್ ಆದ ನಂತರ ಬನಸ್ಕಾಂತ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ವೀಡಿಯೊದಲ್ಲಿ ನೋಡಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ತರಡ್ ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದು, ಈತನನ್ನು ಬಂಧಿಸಿದ್ದಾರೆ. ಈ ಮಧ್ಯೆ ಆತ, ಬೋಲ್ಟ್ ಅನ್ನು ತೆಗೆದುಹಾಕುವ ಉದ್ದೇಶವೇನು ಎಂಬುದರ ಬಗ್ಗೆ ಖಚಿತಪಡಿಸಿಕೊಳ್ಳಲು ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *