ಸಮಗ್ರ ನ್ಯೂಸ್: ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ಪುರುಷತ್ವ ಪರೀಕ್ಷೆ ನಿನ್ನೆ(ನ.4) ನಡೆಸಲಾಗಿದೆ. ಇಂದು(ನ.5)ಅದರ ವರದಿ ಬಂದಿದ್ದು, ಮುರುಘಾ ಶ್ರೀಗಳು ಪಾಸ್ ಆಗಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಾಗಿದೆ.
ನಿನ್ನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶ್ರೀಗಳ ಪುರುಷತ್ವ ಪರೀಕ್ಷೆ ನಡೆದಿದ್ದು, ಬಳಿಕ ಮುರುಘಾ ಶ್ರೀಗಳನ್ನು ಡಿವೈಎಸ್ಪಿ ಕಚೇರಿಗೆ ಹಾಜರುಪಡಿಸಲಾಗಿತ್ತು. ಇನ್ನೂ, ಮುರುಘಾ ಶ್ರೀ ವಿರುದ್ಧ 2 ನೇ ಪೋಕ್ಸೋ ಕೇಸ್ ಹಿನ್ನೆಲೆ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ನ. 8 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ನ. 3 ರಂದು ನೀಡಿದ ಆದೇಶದಂತೆ ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯ ನ. 8ರವರೆಗೆ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇಂದಿಗೆ ಮುರುಘಾ ಶ್ರೀ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕೋರ್ಟ್ಗೆ ಮುರುಘಾಶ ಶ್ರೀಗಳನ್ನು ಹಾಜರುಪಡಿಸಲಾಗಿತ್ತು. ನಂತರ ವಿಚಾರಣೆ ನಡೆಸಿದ ಕೋರ್ಟ್ ನ. 8 ವರೆಗೆ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.
2 ನೇ ಪೋಕ್ಸೋ ಕೇಸ್ ಹಿನ್ನೆಲೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಪೊಲೀಸರು ಮುರುಘಾ ಶ್ರೀ ಕರೆತಂದು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದರು. ಮುರುಘಾಶ್ರೀಗಳ ವಿರುದ್ಧ 2 ನೇ ಪೋಕ್ಸೋ ಪ್ರಕರಣ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಮಠಕ್ಕೆ ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಶ್ರೀ ಕಚೇರಿ, ಬೆಡ್ ರೂಮ್, ಬಾತ್ ರೂಮ್ನಲ್ಲಿ ಮಹಜರು ನಡೆಸಲಾಗಿತ್ತು, ತನಿಖಾಧಿಕಾರಿ CPI ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.