ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿ ಹೃದಯಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ.

Ad Widget ... ..

ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ.

Ad Widget

ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ ಬೈಕ್‌ ಸಮೇತ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದರು. ಇದರಿಂದ ಹೆದರಿಕೊಂಡ ಅಬ್ದುಲ್ಲಾ ಅಲ್ಲಿಯೆ ಕುಸಿದ್ದು ಬಿದ್ದಿದ್ದಾನೆ.

ಇನ್ನು ಆತನನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಡಿವೈಎಸ್ಪಿ ಬೆಳ್ಳಿಯಪ್ಪ, ಸಿಪಿಐ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *