ಸಮಗ್ರ ನ್ಯೂಸ್: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನಪಿದ್ದು ಮತೋರ್ವ ನ ಸ್ಥಿತಿ ಗಂಭೀರವಾಗಿದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಬೈಕ್ ನಲ್ಲಿ ಇದ್ದ ರಾಮೇಗೌಡ(48)ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಸತೀಶ್(45) ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಬೈಕ್ ಸವಾರರು ಬಿಳಿಕೆರೆ ಹೋಬಳಿಯ ರಂಗ್ಯನ ಕೊಪ್ಪಲು ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.