ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಚೆನ್ನಮ್ಮ ಹೆಸರು

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಇರುವ ಈದ್ಗಾ ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮ ಅವರ ಹೆಸರನ್ನಿಡುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರಿಗೆ ಮೇಯರ್ ಈರೇಶ್ ಅಂಚಟಗೇರಿ ಆದೇಶಿಸಿದ್ದಾರೆ.

Ad Widget ... ..

ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯ ಸಂತೋಷ ಚವ್ಹಾಣ ಅವರು, ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಮನವಿ ಮಾಡಿದ್ದರು. ಆಗ ಸಭೆಯಲ್ಲಿ ಠರಾವ್ ಕೂಡ ಪಾಸ್ ಮಾಡಲಾಗಿತ್ತು.

Ad Widget

ಅದರಂತೆ ಇದೀಗ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ಹೆಸರಿಡಲು ಆದೇಶಿಸಲಾಗಿದೆ. ಮೈದಾನ ಪಾಲಿಕೆಯ ಆಸ್ತಿಯಾಗಿದೆ. ಸಾಮಾನ್ಯ ಸಭೆಯ ನಿರ್ಣಯದಂತೆ ಬೋರ್ಡ್ ಹಾಕಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *