ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಭಾಗಮಂಡಲ ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪಾರೆಸ್ಟ್ ವಾಚರ್(ಅರಣ್ಯ ವೀಕ್ಷಕ) ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗಡಿಭಾಗದ ಮಾವಿನಕಟ್ಟೆ ನರುವೋಳು ಮೊಟ್ಟೆ ಬಳಿ ನಡೆದಿದೆ.
ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ (58 ವರ್ಷ ) ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆ ಇ-ಪ್ರಹಾರಿ ತಂತ್ರಾಂಶದಲ್ಲಿ ದಾಖಲಿಸಲು ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಅರಣ್ಯ ಇಲಾಖೆಯ e-prahari ಅನ್ನುವ ತಂತ್ರಾಶದಿಂದ ಸರ್ವೇಗೆ ಕೊಡಗಿನ ಅರಣ್ಯ ಇಲಾಖೆಯ, ಅರಣ್ಯ ವೀಕ್ಷಕ 2ನೇ ಬಲಿಯಾಗಿದ್ದಾರೆ ಎನ್ನಲಾಗಿದ್ದು, ಸಮಗ್ರ ತನಿಖೆಯಿಂದ ಮಾಹಿತಿ ತಿಳಿದುಬರಬೇಕಿದೆ.
ಈ ಹಿಂದೆ ಕೊಡಗು ಜಿಲ್ಲೆಯ ಮಾಕುಟ್ಟದಲ್ಲಿ ಕರ್ತವ್ಯ ನಿರತ ಅರಣ್ಯ ವೀಕ್ಷಕ ನಾಪತ್ತೆಯಾಗಿ ಬಳಿಕ ಶವವಾಗಿ ಪತ್ತೆಯಾಗಿದ್ದರು. ಬೀಟ್ ಗೆ ಹೋದ ಸಂದರ್ಭದಲ್ಲಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಾಸುವ ಬೆನ್ನಲ್ಲೇ ಕೊಡಗಿನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ.